ಈ ಪುಟವನ್ನು ಪರಿಶೀಲಿಸಲಾಗಿಲ್ಲ.
ಪ್ರಾಣಿ ಕಥೆಗಳು
181
ಸಾವರಿಸಿಕೊಂಡು ಆ ಜಿಣಿಮಿಣಿ ದೀಪ ಎತ್ತಿಕೊಳ್ಳುವಷ್ಟರಲ್ಲಿ ಒಲಿಯೊಳಗಿನ ಬುರಲಿ ಬುರ್ರನೇ ಹಾರಿಹೋಗಿದ್ದರಿಂದ ದೀಪ ಆರಿತಲ್ಲದೆ, ಆ ಒಕ್ಕಲಗಿತ್ತಿಯ ಕಣ್ಣೊಳಗೆ ಬೂದಿ ತೂರಿ ಬೀಳಲು ಕಣ್ಣೊರೆಸುತ್ತ `ಅಯ್ಯಯ್ಯೋ' ಎಂದು ಹಲುಬತೊಡಗಿದಳು. ಆ ಸಂಧಿಯಲ್ಲಿ ಸಾಧಿಸಿ ದವಣಿಯಲ್ಲಿ ಅಡಗಿಕೊಂಡಿದ್ದ ಚೋಟಪ್ಪನು ತನ್ನ ಎತ್ತುಗಳನ್ನು ಬಿಟ್ಟಕೊಂಡು ಹೊರಬಿದ್ದನು. ಚೇಳು, ಗುಂಡಗಲ್ಲು, ಬುರಲಿ ಅವನನ್ನು ಬೆಂಬಲಿಸಿದರು. ಹೀಗೆ ಚೋಟಪ್ಪನು ಗೆಳೆಯರ ನೆರವಿನಿಂದ ತನ್ನ ಎತ್ತುಗಳನ್ನು ದೊರಕಿಸಿಕೊಂಡು ಮನೆಗೆ ಮರಳಿದನು.