ಈ ಪುಟವನ್ನು ಪರಿಶೀಲಿಸಲಾಗಿಲ್ಲ.
26
ಜನಪದ ಕಥೆಗಳು
ಗಂಡಹೆಂಡಿರು ಕೂಡಿಕೊಂಡು ಸಡಗರದಿಂದ ತಮ್ಮೂರ ಹಾದಿ ಹಿಡಿದರು. ಹಿಂದೆ ಆ ರಂಡಿ - ಸೂಳೆ ಬೆನ್ನುಹತ್ತಿದ್ದನ್ನು ಕಂಡು, ಆಕೆಯನ್ನು ಹಿಂದಕ್ಕೆ ಹೊಡೆದು ಹಾಕಿದರು.
``ಆರು ವರುಷ ತಿರುಗಿ ಅರಸನನ್ನು ತಂದಿದ್ದೇನೆ ಅತ್ತೇ, ಹೊರಗಡೆ ಬಾ. ನಿನ್ನ ಮಗನನ್ನು ಒಳಗಡೆ ಕರೆದುಕೋ ಎಂದು ಸೊಸೆಯು ಕೂಗಿದಾಗ ಅತ್ತೆಗಾದ ಆನಂದಕ್ಕೆ ಅಳತೆಯಿದೆಯೆ?