ಈ ಪುಟವನ್ನು ಪರಿಶೀಲಿಸಲಾಗಿಲ್ಲ.
ರಮ್ಯಕಥೆಗಳು
49
ಸ್ಥಳ ನೋವಿಲ್ಲದಿಲ್ಲ. ಸಾಯುತ್ತೇನೆ ನನ್ನ ದೊರೆಯೇ ಹೆಚ್ಚಿನ ನೋವು !
ಹಾದಿಬೀದಿ ಉಡುಗಿಸಿ, ಹಾಲಿನ ಚಳಿಕೊಡಿರಿ. ಹಾದಿಯಲ್ಲಿ ನಿಂತವರೆಲ್ಲ ಬದಿಗಾಗಿರಿ. ಸಂಗಮ್ಮನ ತಾಯಿ ಅಳುತ್ತ ಬರುತ್ತಿದ್ದಾಳೆ.
ತಿಪ್ಪೆಯನ್ನು ಉಡುಗಿಸಿರಿ, ತುಪ್ಪದ ಚಳಿಕೊಡಿರಿ. ತಿಪ್ಪೆಯೊಳಗಿನ ಮಂದಿಯೆಲ್ಲ ಬದಿಗಾಗಿರಿ. ಸಂಗಮ್ಮನ ತಂದೆ ಅಳುತ್ತ ಬರುತ್ತಿದ್ದಾನೆ.
ಸಂಜ್ಞೆಯಿಂದ ತಾಯಿತಂದೆಗಳನ್ನು ಹತ್ತಿರಕ್ಕೆ ಕರೆದು ಕಿವಿಯಲ್ಲಿ ಹೇಳಿದಳು - ತಾನು ಹೇಳಬೇಕಾದುದನ್ನು. ಆ ಜೀವಬಿಟ್ಟು ಮೃತ್ಯುವನ್ನು ಗೆದ್ದಳು. ಮುಗಿಲ ದಾರಿಯಲ್ಲಿ ನಿಂತು ಕಿತ್ತೂರದೊರೆಯನ್ನು ಈಡಾಡಿದಳು.
ತಲೆಯಲ್ಲಿ ಚಂಡುಹೂವಿನ ದಂಡೆಯಿಂದ ಶೋಭಿಸುತ್ತಿರುವ ಸಂಗಮ್ಮನನ್ನು ಬಾಳೆಯ ಬನದಲ್ಲಿ ಬಯತಿರಿಸಿದರು.