ಈ ಪುಟವನ್ನು ಪರಿಶೀಲಿಸಲಾಗಿಲ್ಲ.
ಅತಿಮಾನುಷ ಕಥೆಗಳು
63
ಸರಿಯುವಳು. ಗೌರಿಯೂ ಅಲ್ಲಿಯೂ ಎಣ್ಣೆ ಹೂಸತೊಡಗಲು, ಗಂಗೆಯು ಅನಿವಾರ್ಯವಾಗಿ ನೆಲಕ್ಕಿಳಿದು ಹೊಳೆಯಾಗಿ ಹರಿದು ಹೋಗುತ್ತಾಳೆ.
ಗಂಗೆ ಹೋದ ಮರುದಿನವೇ ಗೌರಮ್ಮ ರಜಸ್ವಲೆ ಆಗುತ್ತಾಳೆ. ಮೈದೊಳೆಯಲು ನೀರಿಲ್ಲದಾಗುತ್ತದೆ. ಶಿವನು ಚೇಷ್ಟೆಯಿಂದ ಹಾಲಿನ ಕೊಡವನ್ನು ಕಳಿಸುತ್ತಾನೆ ಗೌರಮ್ಮನ ಕಡೆಗೆ. ``ಹಾಲಿನಿಂದ ಮಿಂದರೆ ಮುಡಚಟ್ಟು ಹೋಗುವದೇ? ತಂಗಿ ಗಂಗಮ್ಮನನ್ನು ಕಳಿಸಿರಿ ಎನ್ನಲು, ಶಿವನು ಬೇಕೆಂದೇ ತುಪ್ಪದ ಕೊಡವನ್ನು ಕಳಿಸುವನು. ``ತುಪ್ಪಿನಲ್ಲಿ ಮಿಂದರೆ ಮೈಲಿಗೆ ಕಳೆಯುವುದೇ? ದಯಮಾಡಿ ತಂಗಿ ಗಂಗಮ್ಮನನ್ನು ಕಳಿಸಿರಿ ಎಂದು ಗೌರಮ್ಮ ಅಂಗಲಾಚಲು ಶಿವನು `ಆಗಲಿ' ಎಂದನು.