68
ಸಣ್ಣಪೋರ
ತೀರ ಸಣ್ಣವ ಇದ್ದಾಗ ಸಣ್ಣಪೋರನ ಲಗ್ನ ಆಗಿತ್ತು. ಲಗ್ನ ಆಗಿದ್ದು ಅವನಿಗೆ ಸಹ ಗೊತ್ತಿರಲಿಲ್ಲ. ``ಎಲ್ಲಾರೂ ಅತ್ತೀಮಾವನ ಮನೀಗಿ ಹೋಗತಾರ ನಾನೂಬಿ ಹೋಗುತೆ ಅಂದಾಗ ``ನಿಂಗ ಖೂನ ಹಿಡಿಯುದಿಲ್ಲ ಮಗಾ ಎಂದು ಅವ್ವ ಅಂದರೂ ಕೇಳಲಿಲ್ಲ ; ಅಪ್ಪ ಅಂದರೂ ಕೇಳಲಿಲ್ಲ. ಅತ್ತೀಮಾವನ ಮನೀಗಿ ಹೋಗಿ ಮುಟ್ಟಿದ. ಮಾವ ಬಂಕಿನಾಗ ಕೂತಿದ್ದ ; ಅತ್ತಿ ಪಡಸಾಲ್ಯಾಗ ಕುಂತಿದ್ದಳು. ಹೆಂಡತಿ ಅತ್ತೀ ಹಂತ್ಯಾಕ ನಿಂತಿದ್ದಳು. ``ಅವ್ವಾ, ಯಾರೋ ಬಂದಾರ ಬಾಗಿಲಾಗ ಎಂತ ಹೆಂಡತಿ ಖೂನ ಹಿಡಿಯಲಾರದೆ ಹೇಳತಾಳ. ``ನಿನ್ನ ಗಂಡ ಬಂದಾನ ಎಂದು ಅವ್ವ ಹೇಳಿ ಮುಗಿಸತಾಳ. ಆದರೆ ಅತ್ತೀನೂ ಬಾ ಅನ್ಲಿಲ್ಲ ; ಮಾವಾನೂ ಬಾ ಅನ್ಲಿಲ್ಲ. ಏಸುದಿನಾ ಆಯ್ತು ಮದುವೆಯಾಗಿ, ಇನ್ನೂ ಯಾಕ ಬಂದಿಲ್ಲಂತ ಇಬ್ಬರಿಗೂ ಸಿಟ್ಟು. ಪೋರ ಕಿಂಡೆ ಬಾಗಿಲಕಡೆ ಹೊಂಟ.
ಕಿಂಡೆ ಬಾಗಿಲ ಹಂತ್ಯಾಕ ನಿಂತ ಹೆಂಡತೀನೂ ಗಂಡನ ಬೆನ್ನು ಹತ್ತಿದಳು. ``ಪೋರಿ ಎತ್ತಹೋಯ್ತು ಅಂತ ತಂದೆ ಕೇಳಿದರ, ಆ ಹುಡುಗನ ಬೆನ್ನು ಹತ್ತಿ ಹೋದಳು - ಎಂದು ತಿಳಿಯಿತು. ತಂದೆತಾಯಿಯರು, ಗಂಡನ ಬೆನ್ನು ಹತ್ತಿ ಮಗಳು ಹೋದರ ಹೋಗಲಿ - ಎಂದರು.
``ನನ್ನ ಹೆಂಡತಿನ್ನ ಕರಕೊಂಡು ಬಂದೀನಿ ನೋಡವ್ವ.
``ಅವರ ಮನ್ಯಾಗ ಉಣ್ಣುತಿನ್ನುದಕ ಬೇಕಾದಷ್ಟು ಒಟ್ಟ್ಯಾದ. ಅದನ್ನು ಬಿಟ್ಟು ನಮ್ಮಲ್ಲ್ಯಾಕ ಕರಕೊಂಡು ಬಂದ್ಯೋ ಮಗ ಎಂದಳು ತಾಯಿ.
``ನೀವು ಉಂಡಿದ್ದು ನಾನು ಉಣ್ಣುವೆ ; ನೀವು ಉಟ್ಟಿದ್ದು ನಾನು ಉಡುವೆ ಎಂದು ಸೊಸೆ ಸಮಾಧಾನ ಹೇಳಿದಳು.
ನಾಲ್ಕಾರು ತಿಂಗಳು ಹೋಗಟ್ಲೆ ಸೊಸೆ ಮೈನೆರೆದಳು. ಊರಾಗ ಯಾರ ಮನ್ಯಾಗ ಶೋಭಾನ ಆಗುತ್ತಲೇ ಪಟೇಲನ ಮನೆಗ ಹೆಣ್ಣುಮಗಳಿಗೆ ಕಳಿಸಬೇಕು - ಹೀಂಗ ಅಲ್ಲಿ ಪದ್ಧತಿಯಿತ್ತು. ಅತ್ತಿ ಅನ್ನ ಉಂಬಲ್ದೆ ಹೋದಳು; ನೀರು ಕುಡ್ಯಲ್ದೆ ಹೋದಳು. ಮಾರಿ ಸಣ್ಣದು ಮಾಡಿಕೊಂಡು ಕುಂತಳು. - ``ಏನು ಬಂದಿದ್ದು ಬರಲಿ, ನಾ ಎದುರಿಸಲಿಕ್ಕೆ ತಯಾರಿದ್ದೀನಿ. ಬಂದದ್ದು ತಗೊಳ್ಳಾಕ