ವಿಷಯಕ್ಕೆ ಹೋಗು

ಪುರುಷನಿಲ್ಲದ ಬಳಿಕ ಬಳಿಕ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya


ಪುರುಷನಿಲ್ಲದ ಬಳಿಕ ಸ್ತ್ರೀಗೆ ಗರ್ಭವಿನ್ನೆಲ್ಲಿಯದೊ ? ಬೀಜವಿಲ್ಲದ ಬಳಿಕ ವೃಕ್ಷವಿನ್ನೆಲ್ಲಿಯದೊ ? ಹಾಲಿಲ್ಲದ ಬಳಿಕ ತುಪ್ಪವಿನ್ನೆಲ್ಲಿಯದೊ ? ಪರಮ ಶ್ರೀಗುರುವಿನುಪದೇಶವಿಲ್ಲದ ಬಳಿಕ ಲಿಂಗಕ್ಕೆ ಪರಮಶಿವಕಳೆಯಿನ್ನೆಲ್ಲಿಯದೊ ? ಇದು ಕಾರಣ
ಉಪದೇಶವಿಲ್ಲದ ಲಿಂಗ ಜಡಪಾಷಾಣವೆಂದೆನಿಸಿತ್ತು . ಆ ಜಡಪಾಷಾಣವ ಅನಂತಕೋಟಿವರ್ಷ ಪೂಜೆಯ ಮಾಡಿದರು ವ್ಯರ್ಥವಲ್ಲದೆ ಸಾರ್ಥವಿಲ್ಲ ನೋಡಾ ! ಇಂತೀ ಭೇದವನರಿಯದೆ ಮೂಢಮತಿಯಿಂದೆ ಜಡಪಾಷಾಣವ ಪೂಜಿಸಿ ಈಷಣತ್ರಯವೆಂಬ ಸಂಕೋಲೆಯಲ್ಲಿ ಬಂಧನವಡೆದು ಭವದಲ್ಲಿ ಘಾಸಿಯಾಗುವ ಹೇಸಿಮೂಳರ ಕಂಡು ನಾಚಿತ್ತಯ್ಯಾ ಎನ್ನ ಮನವು ಅಖಂಡೇಶ್ವರಾ.