ಪುರುಷನ ಮುಂದೆ ಮಾಯೆ
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪುರುಷನ ಮುಂದೆ ಮಾಯೆ ಸ್ತ್ರೀಯೆಂಬ ಅಭಿಮಾನವಾಗಿ ಕಾಡುವುದು. ಸ್ತ್ರೀಯ ಮುಂದೆ ಮಾಯೆ ಪುರುಷನೆಂಬ ಅಭಿಮಾನವಾಗಿ ಕಾಡುವುದು. ಲೋಕವೆಂಬ ಮಾಯೆಗೆ ಶರಣಚಾರಿತ್ರ್ಯ ಮರುಳಾಗಿ ತೋರುವುದು. ಚೆನ್ನಮಲ್ಲಿಕಾರ್ಜುನನೊಲಿದ ಶರಣಂಗೆ ಮಾಯೆಯಿಲ್ಲ
ಮರಹಿಲ್ಲ
ಅಭಿಮಾನವೂ ಇಲ್ಲ.