Library-logo-blue-outline.png
View-refresh.svg
Transclusion_Status_Detection_Tool

ಪೂರ್ವಜನ್ಮವ ನಿವೃತ್ತಿಯ ಮಾಡಿ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಪೂರ್ವಜನ್ಮವ ನಿವೃತ್ತಿಯ ಮಾಡಿ ಶ್ರೀಗುರುಕರಕಮಲದಲ್ಲಿ ಜನಿಸಿದ ಭಕ್ತನ ಪಂಚಭೌತಿಕದ ತನುವಿನಂತೆ ವರ್ಣಿಸಿ ನುಡಿಯಬಹುದೆ ? ಉತ್ತಮಾಧಮ ತೃಣ ಮೊದಲಾದುವೆಲ್ಲವು ಜ್ಯೋತಿಯ ಮುಟ್ಟಿ ಜ್ಯೋತಿಯಪ್ಪುವು ಕೇಳಿರೆ. ಜ್ಯೋತಿರ್ಮಯಲಿಂಗವ ಮುಟ್ಟಿದ ತನು ಕೇವಲ ಜ್ಯೋತಿರ್ಮಯಲಿಂಗ. ಆಧಾರ
ಸ್ವಾಧಿಷಾ*ನ
ಮಣಿಪೂರಕ ಅನಾಹತ
ವಿಶುದ್ಧಿ
ಆಜ್ಞೇಯ ಬ್ರಹ್ಮರಂಧ್ರ ದಳ ಕಳೆ ವರ್ಣ ಅಧಿದೇವತೆ ಎಂದು
ಅಲ್ಲಿ ಶುಕ್ಲ ಶೋಣಿತಾತ್ಮಕನಂತೆ ವರ್ಣಿಸಿ ನುಡಿಯಬಹುದೆ
ಶಿವಲಿಂಗತನುವ ? ಷಡಾಧಾರಚಕ್ರವನು ಎನ್ನ ಸರ್ವಾಂಗದಲ್ಲಿ ಪ್ರತಿಷೆ*ಯ ಮಾಡಿ
ಅಂತರ್ಬಾಹ್ಯದಲ್ಲಿ ಭರಿತನಾಗಿ ಸರ್ವಾಂಗವ ಲಿಂಗವ ಮಾಡಿದ
ಕೂಡಲಚೆನ್ನಸಂಗಾ ಶ್ರೀಗುರುಲಿಂಗ