ಪೂರ್ವಜಾತವಳಿದು ಪುನರ್ಜಾತರೆನಿಸಿ
ಅಂಗದ ಮೇಲೆ ಲಿಂಗವ ಧರಿಸಿ ಲಿಂಗವಂತರೆನಿಸಿದ ಮೇಲೆ; ಮತ್ತೆ ಜಾತಿಸೂತಕ ಜನನಸೂತಕ ಪ್ರೇತಸೂತಕ ರಜಸ್ಸೂತಕ
ಎಂಜಲಸೂತಕ ಬಿಡದನ್ನಕ್ಕರ ಇವರನೆಂತು ಭಕ್ತರೆಂಬೆನಯ್ಯಾ ? ಇವರನೆಂತು ಯುಕ್ತರೆಂಬೆನಯ್ಯಾ ? ಇವರನೆಂತು ಮುಕ್ತರೆಂಬೆನಯ್ಯಾ ? ಶ್ರೀಗುರುಸ್ವಾಮಿ ಶಿಷ್ಯನ ಪೂರ್ವಾಶ್ರಯಮಂ ಕಳೆದು
ಹಸ್ತಮಸ್ತಕಸಂಯೋಗವಂ ಮಾಡಿ
ಕರ್ಣಮಂತ್ರಮಂ ತುಂಬಿ
ಕರಸ್ಥಲಕೆ ಶಿವಲಿಂಗಮಂ ಬಿಜಯಂಗೈಸಿ ಕೊಟ್ಟ ಬಳಿಕ ಕಾಡ್ಗಿಚ್ಚಿನ ಕೈಯಲ್ಲಿ ಕರಡವ ಕೊಯ್ಸಿದಂತಿರಬೇಕು ಭಕ್ತನು ! ಹಿಂದೆ ಮೆದೆಯಿಲ್ಲ ಮುಂದೆ ನಿಲವಿಲ್ಲ_ಇದು ಕಾರಣ ಕೂಡಲಚೆನ್ನಸಂಗಯ್ಯಾ
ನಿಮ್ಮ ಸದ್ಭಕ್ತರು ಸೂತಕವ ಮಾಡಲಿಲ್ಲ