ಪೃಥ್ವಿಗೆ ಹುಟ್ಟಿದ ಪಾಷಾಣ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪೃಥ್ವಿಗೆ ಹುಟ್ಟಿದ ಪಾಷಾಣ
ಬಿನ್ನಣಿಗೆ ಹುಟ್ಟಿದ ಪ್ರತಿಮೆ
ಮಂತ್ರಕ್ಕೆ ಹುಟ್ಟಿದ ಮೂರ್ತಿ
ಗುರುವಿಂಗೆ ಹುಟ್ಟಿದ ಲಿಂಗ_ ಇಂತೀ ಚತುರ್ವಿಧದ ಕೈಗೆ ಕೈಗೆ ಬಾಯ್ಗೆ ಬಾಯ್ಗೆ ಬರಲಾಗಿ ಹೇಸಿ ಲಿಂಗವೆಂದು ಮುಟ್ಟಿ ಪೂಜೆಯ ಮಾಡೆ ಕಾಣಾ ಕೂಡಲಚೆನ್ನಸಂಗಮದೇವಾ.