ಪೃಥ್ವಿಯಲೊದಗಿದ ಘಟವು ಪೃಥ್ವಿಯಲಡಗಿದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪೃಥ್ವಿಯಲೊದಗಿದ ಘಟವು ಪೃಥ್ವಿಯಲಡಗಿದಡೆ ಆ ಪೃಥ್ವಿಯ ಚರಿತ್ರವೆ ಚರಿತ್ರ ನೋಡಾ ! ಅಪ್ಪುವಿನಲೊದಗಿದ ಘಟವು ಅಪ್ಪುವಿನಲಡಗಿದಡೆ ಆ ಅಪ್ಪುವಿನ ಚರಿತ್ರವೆ ಚರಿತ್ರ ನೋಡಾ ! ತೇಜದಲೊದಗಿದ ಘಟವು ತೇಜದಲಡಗಿದಡೆ ಆ ತೇಜದ ಚರಿತ್ರವೆ ಚರಿತ್ರ ನೋಡಾ ! ವಾಯುವಿನಲೊದಗಿದ ಘಟವು ವಾಯುವಿನಲಡಗಿದಡೆ ಆ ವಾಯುವಿನ ಚರಿತ್ರವೆ ಚರಿತ್ರ ನೋಡಾ ! ಆಕಾಶದಲೊದಗಿದ ಘಟವು ಆಕಾಶದಲಡಗಿದಡೆ ಆ ಆಕಾಶದ ಚರಿತ್ರವೆ ಚರಿತ್ರ ನೋಡಾ ! ಗುಹೇಶ್ವರನೆಂಬ ಲಿಂಗದಲೊದಗಿದ ಘಟವು ಲಿಂಗದಲಡಗಿದಡೆ
ಆ ಲಿಂಗದ ಚರಿತ್ರವೆ ಚರಿತ್ರ ನೋಡಾ.