ವಿಷಯಕ್ಕೆ ಹೋಗು

ಪೃಥ್ವಿಯ ಮೇಲಣ ಕಣಿಯ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪೃಥ್ವಿಯ ಮೇಲಣ ಕಣಿಯ ತಂದು
ಪೂಜಾವಿಧಾನಕ್ಕೊಳಗಾದ ಅಷ್ಟತನುವಿನ ಕೈಯಲ್ಲಿ ಕೊಟ್ಟು ಮುಟ್ಟಿ ಪೂಜಿಸಬೇಕೆಂಬರು. ಮೂವರಿಗೆ ಹುಟ್ಟಿದಾತನೆಂದು ಪೂಜಿಸುವಿರೊ ? ಭೂಮಿಗೆ ಹುಟ್ಟಿ ಶಿಲೆಯಾಯಿತ್ತು ಕಲ್ಲುಕುಟ್ಟಿಗ ಮುಟ್ಟಿ ರೂಪಾಯಿತ್ತು. ಗುರುಮುಟ್ಟಿ ಲಿಂಗವಾಯಿತ್ತು. ಇದು ಬಿದ್ದಿತ್ತೆಂದು ಸಮಾಧಿಯ ಹೊಕ್ಕೆವೆಂಬರು ಎತ್ತಿಕೊಂಡು ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡುವುದೆ ವ್ರತವು. ಕಟ್ಟುವ ಠಾವನು ಮುಟ್ಟುವ ಭೇದವನು ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣನೆ ಬಲ್ಲ.