ವಿಷಯಕ್ಕೆ ಹೋಗು

ಪೃಥ್ವಿಯ ಮೇಲೊಂದು ಪರಮಶಾಂತಿ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪೃಥ್ವಿಯ ಮೇಲೊಂದು ಪರಮಶಾಂತಿ ಎಂಬ ಪರ್ವತವ ಕಂಡೆ. ಆ ಪರ್ವತದ ಮೇಲೆ ಪರಮಗುರು ಪರಿಯಾಯವಾಯಿತ್ತ ಕಂಡೆ. ಆ ಪರಿಯಾಯ ಗುರು ಒಂದು ಕಥನದಿಂದ ದೃಷ್ಟಿ ತೆರೆಯಿತ್ತ ಕಂಡೆ. ಆ ದೃಷ್ಟಿಯ ಬೆಳಗಿನಿಂದ ನೆತ್ತಿಯ ಕಲಶ ಪುಟದೋರುತ್ತ ನಡೆದು ಸಸಿಯಾಯಿತ್ತ ಕಂಡೆ. ಆ ಸಸಿಯ ಕೆಳಗಣ ಮೃತ್ತಿಕೆ
ಭಕ್ತರಿಗೆ ಮೂರಾಯಿತ್ತ ಕಂಡೆ ಗುಹೇಶ್ವರಾ