ಪೌರ್ಣಮಿ ಬಪ್ಪನ್ನಕ್ಕ, ಬಾಯಿಬಂಧನದಲ್ಲಿದ್ದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪೌರ್ಣಮಿ ಬಪ್ಪನ್ನಕ್ಕ
ಬಾಯಿಬಂಧನದಲ್ಲಿದ್ದ ಚಕೋರನಂತಿದ್ದೆನಯ್ಯಾ. ಉಣಲಾಗದೆಂಬ ಶಾಸ್ತ್ರವಿಡಿದು ಇದ್ದವನಲ್ಲ. ಉಣಲಾಗದೆಂಬ ಶಾಸ್ತ್ರವುಂಟೆ ಲಿಂಗವಂತಂಗೆ ? ಅಹೋರಾತ್ರಿ ಅಷ್ಟಭೋಗಂಗಳ ಲಿಂಗಕ್ಕೆ ಕೊಟ್ಟು ಕೊಳಬೇಕು. ಮಾಡುವ ನೀಡುವ ನಿಜಭಕ್ತರಿಲ್ಲದ ಕಾರಣ
ಬಾಯ್ದೆರೆಯದಿದ್ದೆನು. ಮಾಡಿಹೆ ನೀಡಿಹೆನೆಂಬ ಸಂತೋಷದ ಆಪ್ಯಾಯನ ಹಿರಿದಾಯಿತ್ತು. ನೀಡಯ್ಯಾ ಸಂಗನಬಸವಣ್ಣಾ ಗುಹೇಶ್ವರಂಗೆ !