ಪ್ರಕೃತಿಗುಣವುಳ್ಳನ್ನಕ್ಕರ ಭಕ್ತನಲ್ಲ. ಕಾಮ
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪ್ರಕೃತಿಗುಣವುಳ್ಳನ್ನಕ್ಕರ ಭಕ್ತನಲ್ಲ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಉಳ್ಳನ್ನಕ್ಕರ ಶರಣನಲ್ಲ. ಹಸಿವು ತೃಷೆ ನಿದ್ರೆ ವಿಷಯ ಉಳ್ಳನ್ನಕ್ಕರ ಪ್ರಸಾದಿಯಲ್ಲ. ಆಚಾರದಲ್ಲಿ ಅನುಭಾವಿ ಪ್ರಸಾದದಲ್ಲಿ ಪರಿಣಾಮಿ
ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣನೆಂಬ ಪ್ರಸಾದಿಗೆ ನಮೋ ನಮೋ ಎಂಬೆನು.