ಪ್ರಣಮವನುಚ್ಚರಿಸುವ ಪ್ರಮಾಣಿಕರೆಲ್ಲರು, ಪ್ರಣವಮಂತ್ರದರ್ಥವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪ್ರಣಮವನುಚ್ಚರಿಸುವ ಪ್ರಮಾಣಿಕರೆಲ್ಲರು
ಪ್ರಣವಮಂತ್ರದರ್ಥವ ತಿಳಿದು ನೋಡಿರೆ. ಪ್ರಣವ `ನಾಹಂ' ಎಂದುದೆ ? ಪ್ರಣವ `ಕ್ಯೋಹಂ' ಎಂದುದೆ ? ಪ್ರಣವ `ಸ್ಯೋಹಂ' ಎಂದುದೆ ? ಪ್ರಣವ `ಚಿದಹಂ' ಎಂದುದೆ ?_ಎನ್ನದಾಗಿ
ಪ್ರಣವ `ಭರ್ಗೋದೇವಸ್ಯ ಧೀಮಹಿ' ಎಂದುದು. ``ಸವಿತುಃ ಪದಮಂಗಃ ಸ್ಯಾತ್ ಭರ್ಗಸ್ತು ಲಿಂಗಮೇವ ಚ ಧೀಮಹಿ ಪದಮಿತ್ಯೇಷಾಂ ಗಾಯತ್ರ್ಯಾಂ ಲಿಂಗಸಂಬಂಧಃ _ಎಂದುದಾಗಿ ಪ್ರಣವದರ್ಥ ತಾನೆ ನಿಮ್ಮ ಮಯವು ಗುಹೇಶ್ವರಾ.