ಪ್ರಣವಮಂತ್ರವ ಕರ್ಣದಲ್ಲಿ ಹೇಳಿ
ಶ್ರೀಗುರು ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷೆ*ಯ ಮಾಡಿದ ಬಳಿಕ
ಪ್ರಾಣದಲ್ಲಿ ಲಿಂಗವಿಪ್ಪುದೆಂಬ ವ್ರತಗೇಡಿಗಳ ಮಾತ ಕೇಳಲಾಗದು. ಒಳಗಿಪ್ಪನೆ ಲಿಂಗದೇವನು ಮಲ ಮೂತ್ರ ಮಾಂಸದ ಹೇಸಿಗೆಯೊಳಗೆ ? ಅಲ್ಲಿ ಪ್ರಾಣವಿಪ್ಪುದಲ್ಲದೆ ಲಿಂಗವಿಪ್ಪುದೆ ? ಆ ಪ್ರಾಣವ ತಂದು ತನ್ನ ಇಷ್ಟಲಿಂಗದಲ್ಲಿ ಇರಿಸಿ ನೆರೆಯ ಬಲ್ಲಡೆ
ಆತನೆ ಪ್ರಾಣಲಿಂಗಸಂಬಂಧಿ. ಅಲ್ಲದವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು