Library-logo-blue-outline.png
View-refresh.svg
Transclusion_Status_Detection_Tool

ಪ್ರಣವವೇ ಪರಬ್ರಹ್ಮವು. ಪ್ರಣವವೇ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪ್ರಣವವೇ ಪರಬ್ರಹ್ಮವು. ಪ್ರಣವವೇ ಪರಾಪರವಸ್ತು. ಪ್ರಣವವೇ ಪರತತ್ವವು ಪ್ರಣವವೇ ಪರಂಜ್ಯೋತಿ ಪ್ರಕಾಶವು. ಪ್ರಣವವೇ ಪರಶಿವ. ಪ್ರಣವವೇ ಶುದ್ಧಪ್ರಸಾದ. ಪ್ರಣವವೇ ಪರಮಪದ. ಪ್ರಣವವೇ. ವೇದಶಾಸ್ತ್ರ ಪುರಾಣಾಗಮಂಗಳುತ್ಪತ್ತಿಗೆ ಕಾರಣ ನೋಡಾ. ಪ್ರಣವವೇ ಸಪ್ತಕೋಟಿ ಮಹಾಮಂತ್ರ
ಅನೇಕಕೋಟಿ ಉಪಮಂತ್ರಂಗಳಿಗೆ ಮಾತೃಸ್ಥಾನ ನೋಡಾ. ಇಂತಪ್ಪ ಶಿವಸ್ವರೂಪವಪ್ಪ ಪ್ರಣವಮಂತ್ರವನೇ ಶುದ್ಧಮಾಯಾಸಂಬಂಧವೆಂಬ ಅಬದ್ಧರ ಎನಗೊಮ್ಮೆ ತೋರದಿರಯ್ಯ. ಮಂತ್ರ ಜಡವಾದಲ್ಲಿಯೆ ಗುರು ಜಡ. ಗುರು ಜಡವಾದಲ್ಲಿಯೆ ಲಿಂಗವು ಜಡ. ಲಿಂಗವು ಜಡವಾದಲ್ಲಿಯೆ ಜಂಗಮವು ಜಡ. ಜಂಗಮವು ಜಡವಾದಲ್ಲಿಯೇ ಪ್ರಸಾದವು ಜಡ. ಪ್ರಸಾದವು ಜಡಯೆಂಬುವರಿಗೆ ಮುಕ್ತಿಯೆಂಬುದು ಎಂದೂ ಇಲ್ಲ. ಮಂತ್ರ ಗುರು ಲಿಂಗ ಜಂಗಮ ಪ್ರಸಾದ ಮುಕ್ತಿ ಈ ಆರು ಸಾಕ್ಷಾತ್ ಶಿವ ತಾನೆಯಲ್ಲದೆ ಬೇರಿಲ್ಲ. ಶಿವ ಬೇರೆ ಇವು ಬೇರೆಯೆಂಬ ಅಜ್ಞಾನ ಕರ್ಮಕಾಂಡಿಗಳ ಪಶುಮತ(ದ)ವರಯೆನಗೊಮ್ಮೆ ತೋರದಿರು. ಇದು ಕಾರಣ
ಪ್ರಣವವೇ ಪರವಸ್ತು. ಪಂಚಾಕ್ಷರವೇ ಪಂಚಮುಖವನ್ನುಳ್ಳ ಪರಮೇಶ್ವರ ತಾನೇ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.