ಪ್ರಮಥವೇದಿಗಳೆಲ್ಲರೂ ಗತಿಯಲೆ ಸಿಲುಕಿದರು.

ವಿಕಿಸೋರ್ಸ್ದಿಂದ



Pages   (key to Page Status)   


ಪ್ರಮಥವೇದಿಗಳೆಲ್ಲರೂ ಗತಿಯಲೆ ಸಿಲುಕಿದರು. ಅತೀತ ಅನಾಗತವೆಂಬ ನುಡಿಯಲೆ ಸಿಲುಕಿದರು. ಶ್ರುತಿವಂತರೆಲ್ಲರೂ ಆಗಮದಲ್ಲಿ ಸಿಲುಕಿದರು. ಇಂಥವನೆ ಲಿಂಗೈಕ್ಯನು ? ನುಡಿದ ನುಡಿಯ ನಡೆಯನು
ನಡೆದ ನಡೆಯ ನುಡಿಯನು
ಬಂದಲ್ಲಿ ಬಾರನು
ನಿಂದಲ್ಲಿ ನಿಲ್ಲನು
ನಿಸ್ಸೀಮನು ಕೂಡಲಚೆನ್ನಸಂಗಾ ಲಿಂಗೈಕ್ಯನು.