ಪ್ರಸಾದಲಿಂಗ ಉಳ್ಳನ್ನಕ್ಕರ, ಪ್ರಾಣಲಿಂಗವೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪ್ರಸಾದಲಿಂಗ ಉಳ್ಳನ್ನಕ್ಕರ
ಪ್ರಾಣಲಿಂಗವೆಂಬ ವಾರ್ತೆ ಭಂಗ ನೋಡಾ ಬಸವಣ್ಣಾ. ಬೀದಿಯಲ್ಲಿ ಕೊಡನನೊಡೆದು ಬಯಲನುಡುಗಿದಡೆ ಉಂಟೆ ಹೇಳಾ ? ಗುಹೇಶ್ವರಲಿಂಗವ ಬೇರೆಮಾಡಿ ಅರಸಲುಂಟೆ ಬಸವಣ್ಣಾ ?