ಪ್ರಸಾದಿಗೆ ಲಕ್ಷಣವಾವುದೆಂದರೆ ಹೇಳಿಹೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪ್ರಸಾದಿಗೆ ಲಕ್ಷಣವಾವುದೆಂದರೆ ಹೇಳಿಹೆ ಕೇಳಿರಯ. ಕಾಯದಿಂದ ಮನಸ್ಸಿನಿಂದ ವಾಕ್ಯದಿಂದ ಸತ್ಯಶುದ್ಧವಾಗಿ
ವಿಶ್ವಾಸ ಶ್ರದ್ಧೆಯೆಡೆಗೊಂಡು ಶರೀರವನು ಪ್ರಾಣವನು ಒಡೆಯೆಂಗೆ ಸಮರ್ಪಿಸಿ ಪ್ರಸಾದವ ಕೈಕೊಳಬಲ್ಲರೆ ಪ್ರಸಾದಿಯೆಂಬೆ. ಹೀಂಗಲ್ಲದೆ ಕುಳವೆಂಬ ಕೋಳಕ್ಕೆ ಸಿಲ್ಕಿದ ಕಾಳ್ವಿಚಾರಿ ಋಣಪಾತಕರ ಪ್ರಸಾದಿ ಸದ್ಭಾವಿಯೆಂತೆಂಬೆನಯ್ಯಾ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.