ಪ್ರಸಾದಿಯ ಪ್ರಸಾದದಲೊದಗಿದ ಪ್ರಸಾದಿಯನು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪ್ರಸಾದಿಯ ಪ್ರಸಾದದಲೊದಗಿದ ಪ್ರಸಾದಿಯನು ಏನೆಂದುಪಮಿಸುವೆನು ಏನೆಂದು ಸ್ತುತಿಸುವೆನಯ್ಯಾ
ಮಹಾಪ್ರಸಾದಿಗೆ ಮಹಾಘನಪ್ರಸಾದವಾದ ಪ್ರಸಾದಿಯನು ಅಗಮ್ಯಪ್ರಸಾದದಲ್ಲಿ ಸ್ವಾಯತವಾದ ಕೂಡಲಸಂಗಮದೇವಾ
ನಿಮ್ಮ ಶರಣ ಚೆನ್ನಬಸವಣ್ಣಂಗೆ ನಮೋ ನಮೋ ಎಂಬೆನು.