ಪ್ರಾಣಲಿಂಗವೆಂಬ ಶಬ್ದಕ್ಕೆ ನಾಚಿತ್ತು
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪ್ರಾಣಲಿಂಗವೆಂಬ ಶಬ್ದಕ್ಕೆ ನಾಚಿತ್ತು ಮನ ನಾಚಿತ್ತು. ಪ್ರಾಣ ಹೋದರೆ ಕಾಯ ಬಿದ್ದಿತ್ತು
ಲಿಂಗ ಒಂದೆಸೆಯಾದಡೆ ಮನ ನಾಚಿತ್ತು. ಗುಹೇಶ್ವರನೆನಲಿಲ್ಲದ ಘನವು.