ಪ್ರಾಣಲಿಂಗಿಗೆ ವಾಯುವೆ ಅಂಗ,
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪ್ರಾಣಲಿಂಗಿಗೆ ವಾಯುವೆ ಅಂಗ
ಆ ಅಂಗಕ್ಕೆ ಸುಮನವೆ ಹಸ್ತ
ಆ ಹಸ್ತಕ್ಕೆ ಅಮೂರ್ತಿಸಾದಾಖ್ಯ
ಆ ಸಾದಾಖ್ಯಕ್ಕೆ ಆದಿಶಕ್ತಿ
ಆ ಶಕ್ತಿಗೆ ಜಂಗಮಲಿಂಗ
ಆ ಲಿಂಗಕ್ಕೆ ಶಾಂತಿಯೇ ಕಳೆ
ಆ ಕಳೆಗೆ ತ್ವಗಿಂದ್ರಿಯವೆ ಮುಖ
ಆ ಮುಖಕ್ಕೆ ಸ್ಪರ್ಶದ್ರವ್ಯಂಗಳನು ರೂಪು_ರುಚಿ_ತೃಪ್ತಿಯನರಿದು ಅನುಭಾವಭಕ್ತಿಯಿಂದರ್ಪಿಸಿ
ಆ ಸುಸ್ಪರ್ಶಪ್ರಸಾದವನು ಭೋಗಿಸಿ ಸುಖಿಸುತ್ತಿಹನು ಕೂಡಲಚೆನ್ನಸಂಗಾ ನಿಮ್ಮ ಪ್ರಾಣಲಿಂಗಿ