ಪ್ರಾಣವು ಲಿಂಗವ ನುಂಗಿತ್ತೋ
ಲಿಂಗವು ಪ್ರಾಣವ ನುಂಗಿತ್ತೋ ಎಂದರಿಯೆನಯ್ಯ. ಭಾವವು ಲಿಂಗದಲ್ಲಿ ತುಂಬಿತ್ತೋ
ಲಿಂಗವು ಭಾವದಲ್ಲಿ ತುಂಬಿತ್ತೋ ಎಂದರಿಯೆನಯ್ಯ. ಮನವು ಲಿಂಗದಲ್ಲಿ ಮುಳುಗಿತ್ತೊ
ಲಿಂಗವು ಮನದಲ್ಲಿ ಮುಳುಗಿತ್ತೋ ಎಂದರಿಯೆನಯ್ಯ. ಅಖಂಡೇಶ್ವರಾ
ನಿಮ್ಮ ಕೂಡುವ ವಿಕಳಾವಸ್ಥೆಯಲ್ಲಿ ಏನೇನೂ ಅರಿಯದಿರ್ದೆನಯ್ಯ.