ಪ್ರಾಣ, ಲಿಂಗದಲ್ಲಿ ಸಮನಿಸದು;

ವಿಕಿಸೋರ್ಸ್ದಿಂದ



Pages   (key to Page Status)   


ಪ್ರಾಣ
ಲಿಂಗದಲ್ಲಿ ಸಮನಿಸದು; ಲಿಂಗ ಪ್ರಾಣದಲ್ಲಿ ಸಮನಿಸದು. ಪ್ರಾಣ ಲಿಂಗ
ಲಿಂಗ ಪ್ರಾಣವೆಂಬುದು ಸಂದು ಸಂಶಯವಲ್ಲದೆ ನಿಜವ ಕೇಳಾ. ದಶಪ್ರಾಣವಳಿದು ಲಿಂಗವೆ ತಾನೆಂದರಿಯ ಬಲ್ಲಡೆ ಅದೇ ಪ್ರಾಣಲಿಂಗ ಗುಹೇಶ್ವರಾ !