ಬಂದಹನೆಂದು ಬಟ್ಟೆಯ ನೋಡಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಂದಹನೆಂದು ಬಟ್ಟೆಯ ನೋಡಿ
ಬಾರದಿದ್ದಡೆ ಕರಗಿ ಕೊರಗಿದೆನವ್ವಾ. ತಡವಾದಡೆ ಬಡವಾದೆ ತಾಯೆ. ಚೆನ್ನಮಲ್ಲಿಕಾರ್ಜುನನ ಒಂದಿರುಳಗಲಿದಡೆ ತಕ್ಕೆಸಡಲಿದ ಜಕ್ಕವಕ್ಕಿಯಂತಾದೆನವ್ವಾ.