ಬಂದುದ ಕೈಕೊಳ್ಳಬಲ್ಲಡೆ ನೇಮ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಂದುದ ಕೈಕೊಳ್ಳಬಲ್ಲಡೆ ನೇಮ
ಇದ್ದುದ ವಂಚನೆಯ ಮಾಡದಿದ್ದಡೆ ನೇಮ. ನಡೆದು ತಪ್ಪದಿದ್ದಡೆ ಅದು ನೇಮ
ನುಡಿದು ಹುಸಿಯದಿದ್ದಡೆ ಅದು ಮುನ್ನವೆ ನೇಮ. ನಮ್ಮ ಕೂಡಲಸಂಗನ ಶರಣರು ಬಂದಡೆ ಒಡೆಯರಿಗೊಡವೆಯನೊಪ್ಪಿಸುವುದೆ ನೇಮ. 231