ಬಟ್ಟಬಯಲೆಲ್ಲ ಗಟ್ಟಿಗೊಂಡಡೆ, ಸ್ವರ್ಗ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಟ್ಟಬಯಲೆಲ್ಲ ಗಟ್ಟಿಗೊಂಡಡೆ
ಸ್ವರ್ಗ ಮತ್ರ್ಯ ಪಾತಾಳಕ್ಕೆ ಠಾವೆಲ್ಲಿಯದೊ ? ಮೇಘನಿರ್ಮಳಜಲವೆಲ್ಲ ಮುತ್ತಾದಡೆ ಸಪ್ತಸಾಗರಂಗಳಿಗೆ ಉದಕವೆಲ್ಲಿಯದೊ ? ಕಷ್ಟಜೀವಿ ಮನುಜರೆಲ್ಲ ನೆಟ್ಟನೆ ಶಿವಜ್ಞಾನಿಗಳಾದಡೆ ಮುಂದೆ ಭವದ ಬಳ್ಳಿ ಬೆಳೆಯಲಿನ್ನೆಲ್ಲಿಯದೊ ? `ಗುರುಭಕ್ತಿಂ ಪರಿತ್ಯಜ್ಯ ಸದ್ಯೋsಪಿ ನರಕಂ ವ್ರಜೇತ್'_ ಇಂತೆಂದುದಾಗಿ
ಕೂಡಲಚೆನ್ನಸಂಗಯ್ಯಾ ಲಕ್ಷಕ್ಕೊಬ್ಬ ಭಕ್ತ
ಕೋಟಿಗೊಬ್ಬ ಶರಣ