ಬಟ್ಟಿಹ ಮೊಲೆಯ ಭರದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಟ್ಟಿಹ ಮೊಲೆಯ ಭರದ ಜವ್ವನದ ಚಲುವ ಕಂಡು ಬಂದಿರಣ್ಣಾ.
ಅಣ್ಣಾ, ನಾನು ಹೆಂಗೂಸಲ್ಲ ; ಅಣ್ಣಾ, ನಾನು ಸೂಳೆಯಲ್ಲ.
ಅಣ್ಣಾ, ಮತ್ತೆ ನನ್ನ ಕಂಡು ಕಂಡು ಆರೆಂದು ಬಂದಿರಣ್ಣಾ ?
ಚೆನ್ನಮಲ್ಲಿಕಾರ್ಜುನನಲ್ಲದ ಮಿಕ್ಕಿನ ಪರಪುರುಷನು ನಮಗಾಗದ ಮೋರೆ ನೋಡಣ್ಣಾ ?