ಬಡಹಾರುವನೇಸು ಭಕ್ತನಾದಡೆಯೂ ನೇಣಿನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಬಡಹಾರುವನೇಸು ಭಕ್ತನಾದಡೆಯೂ ನೇಣಿನ ಹಂಗ ಬಿಡ ! ಮಾಲೆಗಾರನೇಸು ಭಕ್ತನಾದಡೆಯೂ ಬಾವಿಯ ಬೊಮ್ಮನ ಹಂಗ ಬಿಡ ! ಬಣಜಿಗನೇಸು ಭಕ್ತನಾದಡೆಯೂ ಒಟ್ಟಿಲ ಬೆನಕನ ಹಂಗ ಬಿಡ ! ಕಂಚುಗಾರನೇಸು ಭಕ್ತನಾದಡೆಯೂ ಕಾಳಿಕಾದೇವಿಯ ಹಂಗ ಬಿಡ ! ನಾನಾ ಹಂಗಿನವನಲ್ಲ
ನಿಮ್ಮ ಶರಣರ ಹಂಗಿನವನಯ್ಯಾ ಕೂಡಲಸಂಗಮದೇವಾ. 451