ವಿಷಯಕ್ಕೆ ಹೋಗು

ಬಯಲ ಮೂರ್ತಿಗೊಳಿಸಿದನೊಬ್ಬ ಶರಣ.

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಬಯಲ ಮೂರ್ತಿಗೊಳಿಸಿದನೊಬ್ಬ ಶರಣ. ಆ ಮೂರ್ತಿಯಲ್ಲಿ ಭಕ್ತಿಸ್ವಾಯತವ ಮಾಡಿದನೊಬ್ಬ ಶರಣ. ಆ ಭಕ್ತಿಯನೆ ಸುಜ್ಞಾನ ಮುಖವ ಮಾಡಿದನೊಬ್ಬ ಶರಣ. ಆ ಸುಜ್ಞಾನವನು ಲಿಂಗಮುಖವಾಗಿ ಧರಿಸಿದನೊಬ್ಬ ಶರಣ. ಆ ಲಿಂಗವನೆ ಸರ್ವಾಂಗದಲ್ಲಿ ವೇಧಿಸಿಕೊಂಡನೊಬ್ಬ ಶರಣ. ಆ ಸರ್ವಾಂಗವನೆ ನಿರ್ವಾಣಸಮಾಧಿಯಲ್ಲಿ ನಿಲಿಸಿದನೊಬ್ಬ ಶರಣ. ನಾನು ನಿರ್ವಾಣದಲ್ಲಿ ನಿಂದು ಅಗಮ್ಯನಾದೆನೆಂದಡೆ
ಭಕ್ತಿಕಂಪಿತನೆನಿಸಿ ಎನ್ನ ತನ್ನಲ್ಲಿಗೆ ಬರಿಸಿಕೊಂಡನೊಬ್ಬ ಶರಣ. ಗುಹೇಶ್ವರಾ ನಿಮ್ಮ ಶರಣ ಸಂಗನಬಸವಣ್ಣನ ಶ್ರೀಪಾದವ ಕಂಡು ಶರಣೆಂದು ಬದುಕಿದೆನು