ಬಯಸುವ ಬಯಕೆ ನೀನಾದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಯಸುವ ಬಯಕೆ ನೀನಾದ ಪರಿಯೆಂತು ಹೇಳಾ ? ಅರಸುವ ಅರ(ರಿ?)ಕೆ ನೀನಾದ ಪರಿಯೆಂತು ಹೇಳಾ ? ಕಾಯವೆ ಲಿಂಗ ಪ್ರಾಣವೆ ಜಂಗಮವಾದ ಶರಣಂಗೆ ಬೇರೆ ದೇವಾಲಯ ಮಾಡಿಸಲೇಕೆ ಹೇಳಾ ? ಗುಹೇಶ್ವರಲಿಂಗವು ಸಾಧ್ಯವಾಯಿತ್ತೆಂಬುದ ಮಾತಿನಲ್ಲಿ ಕಂಡೆನಲ್ಲದೆ
ಕಾರ್ಯದಲ್ಲಿ ಕಾಣೆ ನೋಡಾ ಸಿದ್ಧರಾಮಯ್ಯಾ.