ಬರಿಯ ನಚ್ಚಿನ ಮಚ್ಚಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬರಿಯ ನಚ್ಚಿನ ಮಚ್ಚಿನ ಭಕ್ತರು
ಲಿಂಗವ ಮುಟ್ಟಿಯೂ ಮುಟ್ಟದ ಒಳಲೊಟ್ಟಿಗಳು
ನೆರೆದು ಗಳಹುತ್ತಿಪ್ಪರು
ತಮ ತಮಗೆ ಅನುಭಾವವ ನುಡಿವರು. ಅನುಭಾವದ ಆಯತವನರಿಯದಿರ್ದರೆ ಹಿಂದಣ ಅನುಭಾವಿಗಳು? ಗುಹೇಶ್ವರಲಿಂಗದ ಸುಖವನು ಮುಟ್ಟಿದರೆ
ಮರಳಿ ಭವಕಲ್ಪಿತವೆಲ್ಲಿಯದೊ?