ವಿಷಯಕ್ಕೆ ಹೋಗು

ಬಸವಣ್ಣನುದ್ಧರಿಸಿದ ಭಕ್ತಿವಿಡಿದು, ಅಂಗದ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಬಸವಣ್ಣನುದ್ಧರಿಸಿದ ಭಕ್ತಿವಿಡಿದು
ಅಂಗದ ಮೇಲೆ ಲಿಂಗವ ಧರಿಸಿ ಗುರುಲಿಂಗಜಂಗಮವನಾರಾಧಿಸಿ
ಅವರೊಕ್ಕುದ ಕೊಂಡು ಮುಕ್ತರಾಗಲರಿಯದೆ
ಬೇರೆ ಇದಿರಿಟ್ಟು ನಂದಿ ವೀರಭದ್ರ ಮತ್ತೆ ಕೆಲವು ಲಿಂಗಂಗಳೆಂದು ಪೂಜಿಸುವ ಲಿಂಗದ್ರೋಹಿಯ ಮುಖವ ನೋಡಲಾಗದು. ಅದೇನು ಕಾರಣವೆಂದಡೆ: ಗಂಡನುಳ್ಳ ಸತಿ ಅನ್ಯಪುರುಷನನಪ್ಪುವಲ್ಲಿ ಪಾಣ್ಬರಪ್ಪರಲ್ಲದೆ ಸತ್ಯರಪ್ಪರೆರಿ ಅದು ಕಾರಣ - ಲಿಂಗವಂತನ ಕೈಯಲ್ಲಿ ಪೂಜಿಸಿಕೊಂಬ ಅನ್ಯಲಿಂಗಂಗಳೆಲ್ಲವು ಹಾದರಕ್ಕೆ ಹೊಕ್ಕ ಹೊಲೆಗೆಟ್ಟವಪ್ಪುವಲ್ಲದೆ ಅವು ಲಿಂಗಂಗಳಲ್ಲ. ತನ್ನ ಲಿಂಗದಲ್ಲಿ ಅವಿಶ್ವಾಸವ ಮಾಡಿ ಅನ್ಯಲಿಂಗಂಗಳ ಭಜಿಸುವಲ್ಲಿ ಆ ಲಿಂಗವಂತ ಕೆರ್ಪ ಕಚ್ಚಿದ ಶ್ವಾನನಪ್ಪನಲ್ಲದೆ ಭಕ್ತನಲ್ಲ. ಅದೆಂತೆಂದಡೆ: ಲಿಂಗದೇಹೀ ಶಿವಾತ್ಮಾಚ ಸ್ವಗೃಹಂ ಪ್ರತಿಪೂಜನಾತ್ (ಪೂಜನಂರಿ) ಉಭಯಂ ಪಾಪಸಂಬಂಧಂ ಶ್ವಾನಶ್ವಪಚಪಾದುಕೈಃ - ಎಂದುದಾಗಿ ಇದುಕಾರಣ
ಈ ಉಭಯವನು ಕೂಡಲಚೆನ್ನಸಂಗಯ್ಯ ಛಿದ್ರಿಸಿ ಚಿನಿಖಂಡವನಾಯ್ದು ದಿಗ್ಬಲಿ ಕೊಟ್ಟುಅಘೋರ ನರಕದಲ್ಲಿಕ್ಕುವನು