ಬಸವಣ್ಣಾ ನಿನ್ನ ಕಂಡು ಎನ್ನ ತನು ಬಯಲಾಯಿತ್ತು. ಬಸವಣ್ಣಾ ನಿನ್ನ ಮುಟ್ಟಿ ಮುಟ್ಟಿ ಎನ್ನ ಕ್ರೀ ಬಯಲಾಯಿತ್ತು. ಬಸವಣ್ಣಾ ನಿನ್ನ ನೆನೆ ನೆನೆದು ಎನ್ನ ಮನ ಬಯಲಾಯಿತ್ತು. ಬಸವಣ್ಣಾ ನಿನ್ನ ಮಹಾನುಭಾವವ ಕೇಳಿ ಕೇಳಿ ಎನ್ನ ಭವಂ ನಾಸ್ತಿಯಾಯಿತ್ತು. ನಮ್ಮ ಗುಹೇಶ್ವರಲಿಂಗದಲ್ಲಿ ನೀನು ಅಜಾತನೆಂಬುದ ನೆಲೆಮಾಡಿ ಭವಪಾಶಂಗಳ ಹರಿದಿಪ್ಪೆಯಾಗಿ
ನಿನ್ನ ಸಂಗದಿಂದಲಾನು ಬದುಕಿದೆನು !