ಬಸವಣ್ಣ ನಿನ್ನ ಹೊಗಳತೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬಸವಣ್ಣ ನಿನ್ನ ಹೊಗಳತೆ ಅಂತಿರಲಿ
ಎನ್ನ ಹೊಗಳತೆ ಅಂತಿರಲಿ
ಗುರುವಾಗಬಹುದು ಲಿಂಗವಾಗಬಹುದು ಜಂಗಮವಾಗಬಹುದು
ಇಂತೀ ತ್ರಿವಿಧವೂ ಆಗಬಹುದು. ನಿನ್ನ ಆಚಾರಕ್ಕೆ ಪ್ರಾಣವಾಗಿ
ಎನ್ನ ಜ್ಞಾನಕ್ಕೆ ಆಚಾರವಾಗಿ ಈ ಉಭಯ ಸಂಗದ ಸುಖದ ಪ್ರಸನ್ನಕ್ಕೆ ಪರಿಣಾಮಿಯಾಗಿ ಬಂದ ಘನಮಹಿಮನು ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನಾಗಬಾರದು ಕಾಣಾ ಸಂಗನಬಸವಣ್ಣಾ.