ವಿಷಯಕ್ಕೆ ಹೋಗು

ಬಸವಣ್ಣ ಮತ್ರ್ಯಲೋಕಕ್ಕೆ ಬಂದು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಬಸವಣ್ಣ ಮತ್ರ್ಯಲೋಕಕ್ಕೆ ಬಂದು ಮಹಾಮನೆಯ ಕಟ್ಟಿ
ಭಕ್ತಿಜ್ಞಾನವೆಂಬ ಜ್ಯೋತಿಯನೆತ್ತಿ ತೋರಲು ಸುಜ್ಞಾನವೆಂಬ ಪ್ರಭೆ ಪಸರಿಸಿತಯ್ಯಾ ಜಗದೊಳಗೆ. ಬೆಳಗಿನೊಳು ತಿಳಿದು ನೋಡಿ ಹರೆದಿದ್ದ ಶಿವಗಣಂಗಳೆಲ್ಲ ನೆರೆದು ಕೂಡಿತಯ್ಯಾ. ಕೂಡಲಚೆನ್ನಸಂಗಮದೇವಾ ನಿಮ್ಮ ಶರಣ ಬಸವಣ್ಣನ ಕೃಪೆಯಿಂದ ಪ್ರಭುದೇವರ ನಿಜವನರಿದು ನಿಶ್ಚಿಂತರಾದರಯ್ಯಾ ಶಿವಗಣಂಗಳೆಲ್ಲರು