ಬಿಂದುವೆ ಪೀಠವಾಗಿ, ನಾದವೇ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬಿಂದುವೆ ಪೀಠವಾಗಿ
ನಾದವೇ ಲಿಂಗವಾದಡೆ ಅದು ಭಿನ್ನಲಿಂಗ ನೋಡಾ. ಕಳೆ ಎಂಬ ಪೂಜೆ ನಿರ್ಮಾಲ್ಯವಾಗಿ
ನಾದಬಿಂದುಕಳಾತೀತ ನೋಡಾ ಮಹಾಘನವು. ಅಲ್ಲಿ ಇಲ್ಲಿ ಸಿಲುಕಿದ ಅಚಲವಪ್ಪ ನಿರಾಳವ ಪ್ರಣವರೂಪೆಂದು ಹೆಸರಿಡಬಹುದೆ ? ನಮ್ಮ ಗುಹೇಶ್ವರನ ನಿಲುವು `ನಿಶ್ಯಬ್ದಂ ಬ್ರಹ್ಮ ಉಚ್ಯತೇ' ಎಂಬುದನರಿಯಾ ಸಿದ್ಧರಾಮಯ್ಯಾ ?