ವಿಷಯಕ್ಕೆ ಹೋಗು

ಬಿದಿರೆಲೆಯ ಮೆಲಿದಡೆ ಮೆಲಿದಂತಲ್ಲದೆ,

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಬಿದಿರೆಲೆಯ ಮೆಲಿದಡೆ ಮೆಲಿದಂತಲ್ಲದೆ
ರಸವ ಹಡೆಯಲು ಬಾರದು
ಮಳಲ ಹೊಸೆದಡೆ ಹೊಸೆದಂತಲ್ಲದೆ
ಸರವಿಯ ಹಡೆಯಲುಬಾರದು. ನೀರ ಕಡೆದಡೆ ಕಡೆದಂತಲ್ಲದೆ
ಬೆಣ್ಣೆಯ ಹಡೆಯಲುಬಾರದು. ನಮ್ಮ ಕೂಡಲಸಂಗಮದೇವನಲ್ಲದೆ ಅನ್ಯದೈವಕ್ಕೆರಗಿದಡೆ ಹೊಳ್ಳ ಕುಟ್ಟಿ ಕೈ ಹೊಟ್ಟೆಯಾದಂತೆ ಆಯಿತ್ತಯ್ಯಾ.