ಬಿರುಗಾಳಿ ಬೀಸಿ ಮರ

ವಿಕಿಸೋರ್ಸ್ದಿಂದ



Pages   (key to Page Status)   


ಬಿರುಗಾಳಿ ಬೀಸಿ ಮರ ಮುರಿವಂತಹ ಸುಳುಹ ಸುಳಿಯದೆ
ತಂಗಾಳಿ ಪರಿಮಳದೊಡಗೂಡಿ ಸುಳಿವಂತೆ ಸುಳಿಯಬೇಕು. ಸುಳಿದಡೆ ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದಡೆ ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದು ಜಂಗಮವಾಗಲರಿಯದ
ನಿಂದು ಭಕ್ತನಾಗಲರಿಯದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಾ