ಬೀಜದಿಂದ ಹುಟ್ಟಿದ ಹುಟ್ಟಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೀಜದಿಂದ ಹುಟ್ಟಿದ ವೃಕ್ಷವು ಬೀಜವ ಹೋಲುವಂತೆ
ತಾಯಿಯಿಂದ ಹುಟ್ಟಿದ ಮಕ್ಕಳು ತಾಯಿಯ ಹೋಲುವಂತೆ
ಧಾನ್ಯಗಳಿಂದ ಬೆಳೆದ ಬೆಳಸು ಧಾನ್ಯಂಗಳ ಹೋಲುವಂತೆ
ಗುರುವಿನಿಂದ ಹುಟ್ಟಿದ ಶಿಷ್ಯನು ಗುರುರೂಪವಲ್ಲದೆ ಬೇರೊಂದು ರೂಪವಲ್ಲವಯ್ಯ ಅಖಂಡೇಶ್ವರಾ.