ಬೆಂಕಿ ಸುಡಬಲ್ಲಡೆ ಕಲ್ಲು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೆಂಕಿ ಸುಡಬಲ್ಲಡೆ ಕಲ್ಲು ನೀರು ಮರಂಗಳಲ್ಲಡಗಬಲ್ಲುದೆ ? ಅರಿವು ಶ್ರೇಷ್ಠವೆಂದಡೆ ಕುರುಹಿನಲ್ಲಡಗಿ ಬೇರೊಂದೆಡೆಯುಂಟೆಂದು ನುಡಿವಾಗ ಅದೇತರಲ್ಲಿ ಒದಗಿದ ಅರಿವು ? ಪಾಷಾಣದಲ್ಲಿ ಒದಗಿದ ಪ್ರಭೆಯಂತೆ
ಆ ಪಾಷಾಣ ಒಡೆಯೆ ಆ ಪ್ರಭೆಗೆ ಕುರುಹುಂಟೆ ? ಇಂತೀ ಲೇಸಪ್ಪ ಕುರುಹನರಿಯಬೇಕು ಕಾಣಾ
ನಮ್ಮ ಗುಹೇಶ್ವರನುಳ್ಳನ್ನಕ್ಕ ಅಂಬಿಗರ ಚೌಡಯ್ಯ.