ಬೆಂದಸಂಸಾರ ಬೆಂಬಿಡದೆ ಕಾಡಿಹುದಯ್ಯ ಏವೆನೇವೆನಯ್ಯಾ ? ಅಂದಂದಿನ ದಂದುಗಕ್ಕೆ ಏವೆನೇವೆನಯ್ಯಾ ? ಬೆಂದ ಒಡಲ ಹೊರೆವುದಕ್ಕೆ ನಾನಾರೆ. ಚೆನ್ನಮಲ್ಲಿಕಾರ್ಜುನಯ್ಯಾ ಕೊಲ್ಲು ಕಾಯಿ ನಿಮ್ಮ ಧರ್ಮ.