ಬೆಳಗಿನೊಳಗಣ ಬೆಳಗು ಮಹಾಬೆಳಗೆಂಬ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಬೆಳಗಿನೊಳಗಣ ಬೆಳಗು ಮಹಾಬೆಳಗೆಂಬ ಪ್ರಸಾದದಲ್ಲಿ ಒದಗಿದ ಪ್ರಸಾದಿಯ ಪರಿಣಾಮದ ಪರಮಾನಂದವನೇನೆಂದುಪಮಿಸುವೆನಯ್ಯಾ ಪರಮಾಶ್ರಯವೇ ತಾನಾಗಿ
ಕೂಡಲಸಂಗಮದೇವಯ್ಯಾ
ಚೆನ್ನಬಸವಣ್ಣನೆಂಬ ಮಹಾಪ್ರಸಾದಿ ಎನ್ನ ವಾಙ್ಮನಕ್ಕಗೋಚರನಾ[ಗೆ]
ನಾನೇನೆಂಬೆನಯ್ಯಾ.