ಬೆವಸಾಯವ ಮಾಡಿ ಮನೆಯ ಬೀಯಕ್ಕೆ ಬತ್ತವಿಲ್ಲದಿರ್ದಡೆ
ಆ ಬೆವಸಾಯದ ಘೋರವೇತಕ್ಕಯ್ಯಾ ? ಕ್ರಯವಿಕ್ರಯವ ಮಾಡಿ ಮನೆಯ ಸಂಚ ನಡೆಯದನ್ನಕ್ಕ ಆ ಕ್ರಯವಿಕ್ರಯದ ಘೋರವೇತಕ್ಕಯ್ಯಾ ? ಒಡೆಯನನೋಲೈಸಿ ತನುವಿಂಗೆ ಅಷ್ಟಭೋಗವ ಪಡೆಯದಿರ್ದಡೆ ಆ ಓಲಗದ ಘೋರವೇತಕ್ಕಯ್ಯಾ ? ಭಕ್ತನಾಗಿ ಭವಂ ನಾಸ್ತಿಯಾಗದಿರ್ದಡೆ; ಆ ಉಪದೇಶವ ಕೊಟ್ಟ ಗುರು
ಕೊಂಡ ಶಿಷ್ಯ
_ ಇವರಿಬ್ಬರ ಮನೆಯಲ್ಲಿ ಮಾರಿ ಹೊಗಲಿ
ಗುಹೇಶ್ವರನೆಂಬವನತ್ತಲೆ ಹೋಗಲಿ.