ಬೇರಿಲ್ಲದ ಗಿಡುವಿಂಗೆ ಪರಿಮಳವಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬೇರಿಲ್ಲದ ಗಿಡುವಿಂಗೆ ಪರಿಮಳವಿಲ್ಲದ ಪುಷ್ಪ ಹುಟ್ಟಿ
ರೂಹಿಲ್ಲದ ಅನಲನು ಅವಗ್ರಹಿಸಿತ್ತು ನೋಡಾ ! ವೃಕ್ಷವಿಲ್ಲದ ದಳದಲ್ಲಿ ಒಂದು ಪಕ್ಷಿ ಹುಟ್ಟಿತ್ತು ನೋಡಾ ! ಅತ್ತಲಿತ್ತಲು ಕಾಣದೆ ನೆತ್ತಿಯ ನಯನದಲ್ಲಿ ನೋಡಿತ್ತಲ್ಲಾ ! ನಿತ್ಯಾನಂದಪರಿಪೂರ್ಣದ ನಿಲವಿನ
ಅಮೃತಬಿಂದುವಿನ ರಸವ ದಣಿಯುಂಡು
ಪಶ್ಚಿಮದಲ್ಲಿ ಗುಹೇಶ್ವರಲಿಂಗವ ಸ್ವೀಕರಿಸಿತ್ತಲ್ಲಾ.