ಬ್ರಹ್ಮಪಾಶ ವಿಷ್ಣುಮಾಯೆ ಎಂಬ ಬಲೆಯ ಬೀಸಿ ಹೊನ್ನು ಹೆಣ್ಣು ಮಣ್ಣು ತೋರಿ ಮುಕ್ಕಣ್ಣನಾಡಿದ ಬೇಂಟೆಯ. ಆಸೆಯೆಂಬ ಕುಟುಕನಿಕ್ಕಿ ಹೇಸದೆ ಕೊಂದೆಯಲ್ಲಾ ಗುಹೇಶ್ವರಾ.