ಬ್ರಹ್ಮವಿಷ್ಣುಗಳ ಮಾಯೆ ತೊತ್ತಳದುಳಿವಂದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಬ್ರಹ್ಮವಿಷ್ಣುಗಳ ಮಾಯೆ ತೊತ್ತಳದುಳಿವಂದು
ರುದ್ರಗಣ ಪ್ರಮಥಗಣಂಗಳೆಂಬವರ ಮಾಯೆ ಮರುಳ್ಮಾಡಿ ಕಾಡುವಂದು
ನೊಸಲ ಕಣ್ಣು ಪಂಚಮುಖ ದಶಭುಜದವರಿಗೆ ಮಾಯೆ ಅರ್ಧಾಂಗಿಯಾದಂದು
ದೇವದಾನವರ ಮಾಯೆ ಅಗಿದಗಿದು ತಿಂಬಂದು
ಅಷ್ಟಾಶೀತಿಸಹಸ್ರ ಋಷಿಗಳ ಮಾಯೆ
ತಪೋಮದದಲ್ಲಿ ಕೆಡಹುವಂದು ನಾನು ಮಾಯಾಕೊಲಾಹಲ (ನಿರ್ಮಾಯನೆಂಬ ಗಣೇಶ್ವರ?)ನಾಗಿರ್ದೆ ಕಾಣಾ ಗುಹೇಶ್ವರಾ.