ವಿಷಯಕ್ಕೆ ಹೋಗು

ಬ್ರಹ್ಮವೆನಲು ಪರಬ್ರಹ್ಮವೆನಲು ಪರಮನೆನಲು

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಬ್ರಹ್ಮವೆನಲು ಪರಬ್ರಹ್ಮವೆನಲು ಪರಮನೆನಲು ಪರಮೇಶ್ವರನೆನಲು ಪರಮಾತ್ಮನೆನಲು ಪರತತ್ವವೆನಲು ಪರಂಜ್ಯೋತಿಯೆನಲು ಪರವಸ್ತುವೆನಲು ಪರಾಪರವೆನಲು ಇಂತಿವೆಲ್ಲಾ ನಾಮದಲ್ಲಿಯೂ ಪ್ರಕಾಶಿಸುತ್ತಿಪ್ಪಾತನು ಪರಶಿವನು. ಪರಶಿವನೆಂದರೆ ಪರಮಾತ್ಮ. ಪರಮಾತ್ಮನೆಂದರೆ ಮಹಾಲಿಂಗ. ಆ ಮಹಾಲಿಂಗ ತಾನೆ ಪ್ರಸಾದಲಿಂಗವಾಗಿ ಉದ್ಭವಿಸಿತ್ತು. ಪ್ರಸಾದಲಿಂಗದಲ್ಲಿ ಜಂಗಮಲಿಂಗ ಹುಟ್ಟಿತ್ತು. ಜಂಗಮಲಿಂಗದಲ್ಲಿ ಶಿವಲಿಂಗ ಹುಟ್ಟಿತ್ತು. ಶಿವಲಿಂಗದಲ್ಲಿ ಗುರುಲಿಂಗ ಜನಿಸಿತ್ತು. ಗುರುಲಿಂಗ ಆಚಾರಲಿಂಗ ಉತ್ಪತ್ಯವಾಯಿತ್ತು. ಇಂತೀ ಷಡ್ವಿಧಲಿಂಗವೂ ಒಂದರಿಂದೊಂದಾದವು. ಒಂದನೊಂದ ಕೂಡಿಹವು. ಇಂತೀ ಷಟ್‍ಸ್ಥಲವೂ ಏಕವೆಂದರಿವುದಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.